ಮಲೆನಾಡು • ಸ್ಥಳೀಯ ಸುದ್ದಿ • ಕನ್ನಡದ ಧ್ವನಿ ಪ್ರತಿಬಿಂಬ
ನಮ್ಮ ಊರಿನ ಸುದ್ದಿ — ನಮ್ಮ ಧ್ವನಿ
ತಾಜಾ ಸುದ್ದಿ
ಪ್ರತಿಬಿಂಬಕ್ಕೆ ಸ್ವಾಗತ • ಸ್ಥಳೀಯ ಮತ್ತು ಮಲೆನಾಡಿನ ಸುದ್ದಿಗಳನ್ನು ವೇಗವಾಗಿ ಓದಿ

ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡುವಲ್ಲಿ ಮುಂದೆ ಬರಬೇಕು


 ತೀರ್ಥಹಳ್ಳಿ :  ಪ್ರಸ್ತುತ  ದಿನಮಾನಗಳಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡುವಲ್ಲಿ ಮುಂದೆ ಬರಬೇಕು ಎಂದು ಲೇಖಕಿ ದೀಪಾ ಹಿರೇಗುತ್ತಿ ಹೇಳಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಸಾಂಸ್ಕೃತಿಕ ವೇದಿಕೆ ಹಾಗೂ ಇತರೆ ವೇದಿಕೆಗಳ ಉದ್ಘಾಟನಾ ಸಮಾರಂಭ ಮತ್ತು ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ಇವರು ಕಾಲೇಜಿನಲ್ಲಿ ವಿವಿಧ ವೇದಿಕೆಗಳಿದ್ದು, ಇವುಗಳ ಮೂಲಕ ವ್ಯಕ್ತಿತ್ವ ವಿಕಸನ ಮಾಡುವಲ್ಲಿ ಸಹಾಯವಾಗುತ್ತದೆ. ಕ್ರೀಡೆ, ಸಾಂಸ್ಕೃತಿಕ ವೇದಿಕೆ, ಎನ್.ಎಸ್.ಎಸ್ ಹಾಗೂ ಇತರೆ ಚಟುವಟಿಕೆಗಳನ್ನು ನಿಮ್ಮನ್ನು ಗುರುತಿಸಲು ಸೂಕ್ತವಾದ ವೇದಿಕೆಗಳಿವೆ ಎಂದು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು. ಸಾಧನೆ ಮಾಡಿದ ಸಾಧಕರೆಲ್ಲರೂ ನಿಮ್ಮ ಹಾಗೆ ತರಗತಿಯಲ್ಲಿ ವಿದ್ಯಾರ್ಥಿಗಳಾಗಿದ್ದು, ಅವರು ಕೂಡ ಜೀವನದಲ್ಲಿ ಬರುವ ಸವಾಲುಗಳನ್ನು ಎದುರಿಸಿ ಯಶಸ್ಸಿನ ಮೆಟ್ಟಿಲನ್ನು ಏರಿದ್ದಾರೆ ಎಂದರು. 

 ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಷ್ಟçಪ್ರಶಸ್ತಿ ವಿಜೇತ ಶಿಕ್ಷಕಿ ಎಸ್ ರತ್ನಕುಮಾರಿ ಅವರು ತಮ್ಮ ಈ ಸಾಧನೆಗೆ ನೇರವಾಗಿ ನನಗೆ ಪಾಠ ಮಾಡಿದ ಗುರುಗಳೇ ಕಾರಣ ನಾನು ಅವರನ್ನು ಸಂತೋಷದಿAದ ನೆನಪಿಸಿಕೊಳ್ಳುತ್ತೇನೆ. ಓದು ಬರಹ ಗೊತ್ತಿಲ್ಲದ ನನ್ನ ತಾಯಿಯ ೫ ಮಕ್ಕಳನ್ನು ಸಾಕುವಲ್ಲಿ ತುಂಬಾ ಕಷ್ಟಪಡುತ್ತಿದ್ದರು. ಅಂತಹ ಸಮಯದಲ್ಲಿ ನನ್ನ ಪ್ರಾಥಮಿಕ ಶಾಲೆಯ ಗುರುಗಳು ನನಗೆ ಓದಲು ಪ್ರೇರೇಪಿಸಿದರು ಹಾಗಾಗಿ ಸಾಧನೆಗೆ ಬಡತನ ಅಡ್ಡಿಯಲ್ಲ ಎಂದು ಹೇಳಿದರು. ಕಾಲೇಜಿನಲ್ಲಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ನಿಮ್ಮ ಗುರುಗಳು ಹೇಳಿಕೊಟ್ಟ ಪಾಠ ಪ್ರವಚನಗಳಲ್ಲಿ ಆಸಕ್ತಿಯಿಂದ ಭಾಗವಹಿಸಿದರೆ ನೀವು ಯಶಸ್ಸುಗಳಿಸಬಹುದೆಂದರು.

ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರುಗಳಾದ ಶ್ರೀ ಅಬ್ದುಲ್ ರೆಹಮಾನ್ ಇವರು ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ 2500.00 ರೂಗಳನ್ನು ಪ್ರೋತ್ಸಾಹ ಧನವನ್ನು ವಿದ್ಯಾರ್ಥಿಗಳಿಗೆ ನೀಡುವುದಾಗಿ ಘೋಷಿಸಿದರು. ಇನ್ನೊರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರುಗಳಾದ ಸತೀಶ್ ಕೆ. ಟಿ ಯವರು ಎಲ್ಲಾ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ಕರೆನೀಡಿದರು.

 ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ ರ‍್ಯಾಂಕ್‌ನ್ನು ಪಡೆದ ೦೪ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸೌಮ್ಯ. ಕೆ. ಸಿ ಇವರು ವಹಿಸಿಕೊಂಡಿದ್ದು, ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪಠ್ಯ ಹಾಗೂ ಸಹ ಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಉತ್ತಮ ಪ್ರಜೆಗಳಾಗಿ ಬೆಳೆಯಲು ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕೆಂದರು. ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಐಕ್ಯೂಎಸಿ ಸಂಚಾಲಕರಾದ ಡಾ. ಗಣಪತಿ. ಹೆಚ್. ಎ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಾಂಸ್ಕೃತಿಕ ವೇದಿಕೆಯ ಸಂಚಾಲಕರಾದ ಶ್ರೀ ಕೃಷ್ಣಮೂರ್ತಿ ಕೆ ಸರ್ವರನ್ನು ವಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬೋಧಕ ಹಾಗೂ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.