ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣಾ ಸಮಿತಿ, ತೀರ್ಥಹಳ್ಳಿ ಇವರ ಆಶ್ರಯದಲ್ಲಿ ಹಾಗೂ ಆರ್ಯ ಈಡಿಗರ ಸಂಘ, ಬಿಲ್ಲವ ಸಂಘ, ನಾರಾಯಣ ಗುರು ವಿಚಾರ ವೇದಿಕೆ, ಈಡಿಗ-ಬಿಲ್ಲವ ಮಹಿಳಾ ಸಂಘ ಮತ್ತು ಸಮಾಜದ ಸಹಕಾರ ಸಂಘಗಳ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ಸಮಾಜ ಬಾಂಧವರ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವು ಅಕ್ಟೋಬರ್ 24, 2026 ಶನಿವಾರದಂದು ತೀರ್ಥಹಳ್ಳಿಯ ಸುವರ್ಣ ಸಂಸ್ಕೃತಿ ಭವನದ ಆವರಣದಲ್ಲಿ ಜರುಗಲಿದೆ. ಅಂದು ಬೆಳಿಗ್ಗೆ 9:00 ಗಂಟೆಗೆ ತೀರ್ಥಹಳ್ಳಿಯ ಕುಶಾವತಿ ಪಾರ್ಕ್ನಿಂದ ಭವ್ಯ ಮೆರವಣಿಗೆ ಆರಂಭವಾಗಲಿದ್ದು ಸಂಸ್ಕೃತಿ ಮಂದಿರದ ಆವರಣದಲ್ಲಿ ಬೆಳಿಗ್ಗೆ 11:00 ಗಂಟೆಯಿಂದ ಸಭಾ ಕಾರ್ಯಕ್ರಮ ನಡೆಯಲಿದೆ
ಈ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಶ್ರೀ ರೇಣುಕಾನಂದ ಸ್ವಾಮೀಜಿಯವರು (ಅಧ್ಯಕ್ಷರು: ಶ್ರೀ ನಾರಾಯಣಗುರು ಮಹಾಸಂಸ್ಥಾನ, ಶ್ರೀ ಕ್ಷೇತ್ರ ಗರಡ, ನಿಟ್ಟೂರು, ಸಾಗರ), ಶ್ರೀ ಶ್ರೀ ಶ್ರೀ ಯೋಗೇಂದ್ರ ಅವಧೂತರು (ಶ್ರೀ ಕಾಳಿಕಾಂಬಾ ಪೀಠ, ಶ್ರೀ ಕ್ಷೇತ್ರ ಸಾಗರಗದ್ದೆ) ಹಾಗೂ ಶ್ರೀ ಎಸ್. ರಾಮಪ್ಪನವರು (ಧರ್ಮದರ್ಶಿಗಳು, ಶ್ರೀ ಗಂಧದ ಕೋಠೇಶ್ವರ ದೇವಸ್ಥಾನ, ಸಿಗಂಧೂರು ) ಇವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನೆರವೇರಲಿದ್ದು ಸಭಾಧ್ಯಕ್ಷತೆಯನ್ನು , ಶ್ರೀ ನಾರಾಯಣ ಗುರು ಜಯಂತಿ ಆಚರಣಾ ಸಮಿತಿ ಯ ಅಧ್ಯಕ್ಷ ಶ್ರೀ ಅಶೋಕ ಮೂರ್ತಿ ವಹಿಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಎಸ್. ಮಧು ಬಂಗಾರಪ್ಪ ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ, ಕೆ.ಪಿ.ಸಿ.ಸಿ ಅಧ್ಯಕ್ಷ ಶ್ರೀ ಬಿ.ಕೆ. ಹರಿಪ್ರಸಾದ್, ಸಂಸದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಕಾರ್ಕಳ ಕ್ಷೇತ್ರದ ಶಾಸಕ ಶ್ರೀ ಸುನಿಲ್ ಕುಮಾರ್ , ಸಾಗರ ಶಾಸಕ ಶ್ರೀ ಬೆಳೂರು ಗೋಪಾಲಕೃಷ್ಣ ಪಾಲ್ಗೊಳ್ಳಲಿದ್ದಾರೆ.
ಈ ಸಮಾರಂಭದಲ್ಲಿ ಮಾಜಿ ಸಚಿವ ಶ್ರೀ ಕಾಗೋಡು ತಿಮ್ಮಪ್ಪನವರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ.
ಸಮಾವೇಶದಲ್ಲಿ ಈ ಕೆಳಗಿನ ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಡಲು ನಿರ್ಧರಿಸಲಾಗಿದೆ:
1. ಶೈಕ್ಷಣಿಕ ಸಂಸ್ಥೆ ಪ್ರಾರಂಭ ಮತ್ತು ತಾಂತ್ರಿಕ ಶಿಕ್ಷಣಕ್ಕೆ ಆದ್ಯತೆ ನೀಡುವುದು.
2. ಎಲ್ಲಾ ರಾಜಕೀಯ ಪಕ್ಷಗಳಲ್ಲಿಯೂ ಸಮಾಜದ ಅರ್ಹರಿಗೆ ಅಧಿಕಾರದ ಸ್ಥಾನಮಾನಗಳಲ್ಲಿ ಆದ್ಯತೆ ನೀಡುವುದು.
3. ಶೇಕಡಾ 99% ರಷ್ಟು ಈಡಿಗ ಸಮುದಾಯದವರಿರುವ ಕರಾವಳಿ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸದಿದ್ದರೆ ಮುಂಬರುವ ಚುನಾವಣೆಗಳಲ್ಲಿ ಮತದಾನ ಬಹಿಷ್ಕಾರ ಮಾಡುವುದು.
4. ಈಡಿಗ ಸಮಾಜದ ಕುಲಕಸುಬನ್ನು ಕಸಿದುಕೊಂಡ ಸರ್ಕಾರಗಳು ಮಧ್ಯ ಮಾರಾಟ ಪರವಾನಗಿಯಲ್ಲಿ ಶೇ.50% ರಷ್ಟು ಮೀಸಲಾತಿ ನೀಡಬೇಕು.
5. ಜಾತಿ ಗಣತಿ ಸಮೀಕ್ಷೆಯನ್ನು ಸರ್ಕಾರಕ್ಕೆ ಸಲ್ಲಿಸಿದ ಕಾಂತರಾಜ್ ಮತ್ತು ಜಯಪ್ರಕಾಶ್ ಹೆಗ್ಡೆ ವರದಿಯನ್ನು ತಕ್ಷಣ ಬಿಡುಗಡೆ ಮಾಡಬೇಕು.
6. ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಕನಿಷ್ಠ ರೂ. 500 ಕೋಟಿ ಮೀಸಲಿಡಬೇಕು ಎಂಬ ಹಕ್ಕೊತ್ತಾಯವನ್ನು ಸಭೆ ಮಂಡಿಸಲಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಸಂಘಟಕರು ಕೋರಿದ್ದಾರೆ.
As an Amazon Associate I earn from qualifying purchases.
