ಮಲೆನಾಡು • ಸ್ಥಳೀಯ ಸುದ್ದಿ • ಕನ್ನಡದ ಧ್ವನಿ ಪ್ರತಿಬಿಂಬ
ನಮ್ಮ ಊರಿನ ಸುದ್ದಿ — ನಮ್ಮ ಧ್ವನಿ
ತಾಜಾ ಸುದ್ದಿ
ಪ್ರತಿಬಿಂಬಕ್ಕೆ ಸ್ವಾಗತ • ಸ್ಥಳೀಯ ಮತ್ತು ಮಲೆನಾಡಿನ ಸುದ್ದಿಗಳನ್ನು ವೇಗವಾಗಿ ಓದಿ

ಸೇವಾ ಸಂಕಲ್ಪ ಯೋಜನೆಯ ಭಾಗವಾಗಿ ಅಂಗನವಾಡಿ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಸಮಾರಂಭ ; ಉತ್ತಮ ಅಂಗನವಾಡಿ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಮಮ್ತಾಜ್ ರವರಿಗೆ ಮಹಿಳಾ ಮೋರ್ಚಾದ ವೇದಿಕೆಯಲ್ಲಿ ಸನ್ಮಾನ

ಸೇವಾ ಸಂಕಲ್ಪ ಯೋಜನೆಯ ಭಾಗವಾಗಿ ಅಂಗನವಾಡಿ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಸಮಾರಂಭ

ಕನ್ನಂಗಿಯಲ್ಲಿ ಬಿಜೆಪಿ ಮಹಿಳಾಮೋರ್ಚಾ ಆಯೋಜಕತ್ವದಲ್ಲಿ ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತ ಸೇವಾ ಸಂಕಲ್ಪ ಯೋಜನೆಯ ಭಾಗವಾಗಿ ಅಂಗನವಾಡಿ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿದರು,




 ಈ ಕಾರ್ಯಕ್ರಮದಲ್ಲಿ ತಾಲೂಕಿನ ಉತ್ತಮ ಅಂಗನವಾಡಿ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಕನ್ನಂಗಿ ಅಂಗನವಾಡಿ ಶಿಕ್ಷಕಿ ಶ್ರೀಮತಿ ಮಮ್ತಾಜ್ ರವರನ್ನು ಬಿಜೆಪಿ ಮಹಿಳಾ ಮೋರ್ಚಾದ ವೇದಿಕೆಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು 


 ಸಭೆಯಲ್ಲಿ ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀ ಹೆದ್ದೂರ್ ನವೀನ್, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಯಶೋಧ ಮಂಜುನಾಥ್, ಜಿಲ್ಲಾ ಮಹಿಳಾಮೂರ್ತಿ ಅಧ್ಯಕ್ಷರಾದ ಮಧುರ ಶಿವಾ ನಂದ, ಕುಸುಮ ಮಂಜುನಾಥ್  ಡಾಕಮ್ಮ, ಸಂಧ್ಯಾ ರಮೇಶ್, ಜ್ಯೋತಿ ಮೋಹನ್, ಜ್ಯೋತಿ ದಿಲೀಪ್, ಸುಪ್ರಿತಾ ಮತ್ತಿತರರು ಉಪಸ್ಥಿತರಿದ್ದರು