ಮಲೆನಾಡು • ಸ್ಥಳೀಯ ಸುದ್ದಿ • ಕನ್ನಡದ ಧ್ವನಿ ಪ್ರತಿಬಿಂಬ
ನಮ್ಮ ಊರಿನ ಸುದ್ದಿ — ನಮ್ಮ ಧ್ವನಿ
ತಾಜಾ ಸುದ್ದಿ
ಪ್ರತಿಬಿಂಬಕ್ಕೆ ಸ್ವಾಗತ • ಸ್ಥಳೀಯ ಮತ್ತು ಮಲೆನಾಡಿನ ಸುದ್ದಿಗಳನ್ನು ವೇಗವಾಗಿ ಓದಿ

ತೀರ್ಥಹಳ್ಳಿ ಜೆ.ಸಿ. ಆಸ್ಪತ್ರೆಗೆ ಆರೋಗ್ಯ ಇಲಾಖೆಯ ವಿಭಾಗೀಯ ಸಹನಿರ್ದೇಶಕರ ಭೇಟಿ; ನ್ಯೂನತೆಗಳನ್ನು ಸರಿಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ





 

ತೀರ್ಥಹಳ್ಳಿ ಜೆ.ಸಿ. ಆಸ್ಪತ್ರೆಗೆ ಆರೋಗ್ಯ ಇಲಾಖೆಯ ವಿಭಾಗೀಯ ಸಹನಿರ್ದೇಶಕರ ಭೇಟಿ

ತೀರ್ಥಹಳ್ಳಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಭಾಗೀಯ ಸಹನಿರ್ದೇಶಕ ಡಾ. ರವಿ ಆರ್. ಅವರು ತೀರ್ಥಹಳ್ಳಿಯ ಶ್ರೀ ಜೆ.ಸಿ. ಆಸ್ಪತ್ರೆಗೆ ಭೇಟಿ ನೀಡಿ ವಿವಿಧ ವಿಭಾಗಗಳ ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ವಿವಿಧ ವಿಭಾಗಗಳ ಕಾರ್ಯನಿರ್ವಹಣೆ ಹಾಗೂ ವ್ಯವಸ್ಥೆಗಳನ್ನು ಪರಿಶೀಲಿಸಿದ ಅವರು, ಕಂಡುಬಂದ
ನ್ಯೂನತೆಗಳನ್ನು ಸರಿಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಸ್ಪತ್ರೆಯ ನಾನ್-ಕ್ಲಿನಿಕಲ್ ಸಿಬ್ಬಂದಿಗೆ ಸಕಾಲದಲ್ಲಿ ವೇತನ ಪಾವತಿಯಾಗದಿರುವುದನ್ನು ಗಮನಿಸಿದ ಅವರು, ಸಂಬಂಧಿಸಿದ ಏಜೆನ್ಸಿಯನ್ನು ಸಂಪರ್ಕಿಸಿ ಸಿಬ್ಬಂದಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಯಾಗುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬಳಿಕ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಡಾ. ರವಿ ಅವರು ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿಯನ್ನು ಪರಿಶೀಲಿಸಿದರು. ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.

ಪ್ರಥಮ ಬಾರಿಗೆ ತೀರ್ಥಹಳ್ಳಿ ತಾಲ್ಲೂಕಿಗೆ ಆಗಮಿಸಿದ ವಿಭಾಗೀಯ ಸಹನಿರ್ದೇಶಕ ಡಾ. ರವಿ ಆರ್. ಅವರನ್ನು ತಾಲ್ಲೂಕು ಆರೋಗ್ಯ ಇಲಾಖಾ ನೌಕರರ ಸಂಘದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸತೀಶ್ ಟಿ.ವಿ., ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅನಿಕೇತನ್ ಕೆ.ಟಿ., ಜೆ.ಸಿ. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಅರವಿಂದ್ ಕೆ.ವಿ., ಹಿರಿಯ ವೈದ್ಯಾಧಿಕಾರಿ ಡಾ. ಪ್ರಕಾಶ್ ಕೆ.ಎಸ್., ಮೇಟ್ರನ್ ಶಿವಿಗಂಗಮ್ಮ, ಸಹಾಯಕ ಆಡಳಿತಾಧಿಕಾರಿ ಅನುಸೂಯ ಹೆಗಡೆ, ಕಚೇರಿ ಅಧೀಕ್ಷಕ ಮೃತ್ಯುಂಜಯ, ಡಿಜೆಡಿಯ ಮುಖ್ಯ ಆರೋಗ್ಯ ಮೇಲ್ವಿಚಾರಣಾಧಿಕಾರಿ ಶ್ರೀನಿವಾಸ್, ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಯಲಕ್ಷ್ಮಿ, ಟಿಹೆಚ್‌ಒ ಕಚೇರಿಯ ಬಿಪಿಎಂ ಗಿರಿ ಡಿ.ಟಿ., ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಅನಿತಾ ಬಿ.ಸಿ., ಆಶಾ ಮೆಂಟರ್ ಪಾಲಾಕ್ಷಿ, ಆರ್‌ಬಿಎಸ್‌ಕೆ ಕಾರ್ಯಕ್ರಮದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ, ಜೆ.ಸಿ. ಆಸ್ಪತ್ರೆ ಮತ್ತು ಟಿಹೆಚ್‌ಒ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.