ತೀರ್ಥಹಳ್ಳಿ: ರಸ್ತೆ ಸುರಕ್ಷತೆಯು ಸಾರ್ವಜನಿಕ ಜೀವ ರಕ್ಷಣೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ವಾಹನ ಸವಾರರು ಹಾಗೂ ಚಾಲಕರು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ರೋಟರಿ ಜಿಲ್ಲೆ 3182ರ ಜಿಲ್ಲಾ ಗವರ್ನರ್ ರೋ. ಬಿ. ಎಂ. ಭಟ್ ಕರೆ ನೀಡಿದರು. ರೋಟರಿ ಕ್ಲಬ್ ತೀರ್ಥಹಳ್ಳಿ ವತಿಯಿಂದ ತುಂಗಾ ನದಿಯ ಹೊಸ ಸೇತುವೆಯ ಪಕ್ಕದಲ್ಲಿ ನಿರ್ಮಿಸಲಾದ 'ರಸ್ತೆ ಸುರಕ್ಷತೆಯ ನಿಯಮಗಳ ಸೂಚನಾ ಫಲಕ' ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗುಣಮಟ್ಟದ ಹೆಲ್ಮೆಟ್ ಧರಿಸುವುದು ಕಡ್ಡಾಯ:
ಮಾತನ್ನು ಮುಂದುವರಿಸಿದ ಬಿ.
"ಮದ್ಯ ಅಥವಾ ಯಾವುದೇ ರೀತಿಯ ಅಮಲು ಪದಾರ್ಥ ಸೇವಿಸಿ ವಾಹನ ಚಲಾಯಿಸುವುದು ಕಾನೂನಿನ ಪ್ರಕಾರ ಗಂಭೀರ ಅಪರಾಧವಾಗಿದೆ. ಜೊತೆಗೆ ವಾಹನ ಚಲಾಯಿಸುವಾಗ ಮೊಬೈಲ್ ಫೋನ್‌ನಲ್ಲಿ ಮಾತನಾಡುವುದು ಅಥವಾ ಸಂದೇಶ ರವಾನಿಸುವುದು ಅಪಘಾತಗಳಿಗೆ ಆಹ್ವಾನ ನೀಡಿದಂತೆ. ಇಂತಹ ನಿರ್ಲಕ್ಷ್ಯತನದಿಂದ ಚಾಲಕರು ದೂರವಿರಬೇಕು" ಎಂದು ಅವರು ಎಚ್ಚರಿಸಿದರು.
ರೋಟರಿ ಸಂಸ್ಥೆಯ ಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ:
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪೊಲೀಸ್ ಸಬ್ ಇನ್ಸ್ಪಕ್ಟರ್ ಶ್ರೀಮತಿ ಸುಷ್ಮಾ ಅವರು ಮಾತನಾಡಿ, "ಸಂಚಾರಿ ನಿಯಮಗಳು ಹಾಗೂ ರಸ್ತೆ ಸುರಕ್ಷತೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸಲು ಮುಂದಾಗಿರುವ ರೋಟರಿ ಕ್ಲಬ್ ತೀರ್ಥಹಳ್ಳಿಯ ಈ ಕಾರ್ಯ ಶ್ಲಾಘನೀಯ" ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸರಳ ಉದ್ಘಾಟನಾ ಸಮಾರಂಭದಲ್ಲಿ ರೋಟರಿ ಕ್ಲಬ್ ತೀರ್ಥಹಳ್ಳಿಯ ಅಧ್ಯಕ್ಷರಾದ ರೋ. ಎನ್. ಹೆಚ್. ರಮೇಶ್, ವಲಯ 11ರ ಸಹಾಯಕ ಗವರ್ನರ್ ರೋ. ಎಸ್. ನಾಗರಾಜ್, ಜೋನಲ್ ಲೆಫ್ಟಿನೆಂಟ್ ರೋ. ವಿಷ್ಣುಮೂರ್ತಿ ಹಾಗೂ ರೋಟರಿ ಸಂಸ್ಥೆಯ ಪ್ರಮುಖ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
