ಮಲೆನಾಡು • ಸ್ಥಳೀಯ ಸುದ್ದಿ • ಕನ್ನಡದ ಧ್ವನಿ ಪ್ರತಿಬಿಂಬ
ನಮ್ಮ ಊರಿನ ಸುದ್ದಿ — ನಮ್ಮ ಧ್ವನಿ
ತಾಜಾ ಸುದ್ದಿ
ಪ್ರತಿಬಿಂಬಕ್ಕೆ ಸ್ವಾಗತ • ಸ್ಥಳೀಯ ಮತ್ತು ಮಲೆನಾಡಿನ ಸುದ್ದಿಗಳನ್ನು ವೇಗವಾಗಿ ಓದಿ

ದಿನಾಂಕ 07-11-2026ರಂದು ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಪ್ರಜಾಸೇವಾ ಕಾರ್ಯಕ್ರಮ

ಪ್ರಜಾ ಸೇವಾ ಕಾರ್ಯಕ್ರಮ

ತೀರ್ಥಹಳ್ಳಿ: ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಒದಗಿಸುವ ಸದುದ್ದೇಶದಿಂದ ರಾಜ್ಯ ಸರ್ಕಾರದ ಸುತ್ತೋಲೆಯ ಮಾರ್ಗಸೂಚಿಯಂತೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ‘ಪ್ರಜಾಸೇವೆ ಅಭಿಯಾನ’ದಡಿ ವಿಶೇಷ ಸಭೆಯನ್ನು ಆಯೋಜಿಸಲಾಗಿದೆ.

ತಹಶೀಲ್ ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿಗಳ ಕಾರ್ಯಾಲಯವು ಈ ಕುರಿತು ಪ್ರಕಟಣೆ ಹೊರಡಿಸಿದ್ದು  07-11-2026ರಂದು ಪೂರ್ವಾಹ್ನ 9:30 ಗಂಟೆಗೆ ಪಟ್ಟಣ ಪಂಚಾಯತಿ ವ್ಯಾಪ್ತಿಗೆ ಬರುವ  ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಈ ಪ್ರಜಾಸೇವಾ ಸಭೆಯು ಜರುಗಲಿದೆ ಎಂದು ತಿಳಿಸಿದೆ.

ಅಭಿಯಾನದ ಪ್ರಮುಖ ಉದ್ದೇಶಗಳು:

* ಸಾರ್ವಜನಿಕರಿಂದ ಅಹವಾಲು ಹಾಗೂ ಕುಂದುಕೊರತೆಗಳನ್ನು ಸ್ವೀಕರಿಸುವುದು.

* ಸಮಸ್ಯೆಗಳಿಗೆ ತ್ವರಿತವಾಗಿ ಹಾಗೂ ಸಮಾಧಾನಕರ ಪರಿಹಾರಗಳನ್ನು ಕಲ್ಪಿಸುವುದು.